ಮುಂಡೂರು ಹಲ್ಲೆ ಪ್ರಕರಣವನ್ನು ತಿರುಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರದಿಂದ ಪೊಲೀಸ್ ಇಲಾಖೆಗೆ ಮನವಿ

0

ಪುತ್ತೂರು: ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರ ನೀಚ ಕೆಲಸ. ಈ ಪ್ರಕಣವನ್ನು ತಿರುಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರ ಮನವಿ ಮಾಡಿದೆ.

500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ ಅಮೋಘ ಕ್ಷಣ ಜ.22ರ ಅಯೋಧ್ಯೆಯ ಶ್ರೀ ರಾಮಮಂದಿರ ಪ್ರತಿಷ್ಠಾಪನೆ ಸಂದರ್ಭದಲ್ಲಿ ಮಂತ್ರಾಕ್ಷತೆ ವಿತರಿಸುವುದು ಸಹಿತ ರಾಮಮಂದಿರಕ್ಕೆ ಶುಭಕೋರಿ ಪುತ್ತೂರಿನಲ್ಲಿ ಪ್ರಪ್ರಥಮ 3ಡಿ ಬ್ಯಾನರ್ ಅಳವಡಿಸಿ ರಾಷ್ಟ್ರೀಯ ಹಬ್ಬದಂತೆ ಮನೆ ಮನೆಗಳಲ್ಲಿ ಆಚರಿಸಲು ಪುತ್ತಿಲ ಪರಿವಾರ ರಾಮಮಂದಿರ ಪ್ರತಿಷ್ಠಾಪನೆಯನ್ನು ಆಚರಿಸಲು ಕಾಯುತ್ತಿದ್ದೇವೆ.

ಈ ಸಂದರ್ಭದಲ್ಲಿ ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ಹಿಂದೂಗಳ ಪರಮಶ್ರೇಷ್ಠ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರ ನೀಚ ಕೆಲಸ. ಜಾಗದ ಗಲಾಟೆಗೆ ನಡೆದ ಘಟನೆ ಎಂದು ಪೊಲೀಸ್ ಎಫ್‌ಐಆರ್ ನಲ್ಲೇ ಉಲ್ಲೇಖ ಆಗಿದೆ. ಇಂತಹ ಸಂದರ್ಭದಲ್ಲಿ ತಪ್ಪು ಮಾಹಿತಿ ಹೋಗುವ ಮುಂದೆ ತಕ್ಷಣ ಸ್ಪಷ್ಟಿಕರಣ ಕೊಟ್ಟು ಗೊಂದಲ ನಿವಾರಿಸಿದ ದಕ್ಷಿಣ ಕನ್ನಡ ಎಸ್ಪಿ ರಿಷ್ಶಂತ್ ಅವರಿಗೆ ಶ್ರೀರಾಮಚಂದ್ರನ ಪರಮಭಕ್ತರ ಪರವಾಗಿ ಧನ್ಯವಾದ ಸಮರ್ಪಿಸುತ್ತಾ. ದುರುದ್ದೇಶದಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ, ತೇಜೋವಧೆ, ಧಾರ್ಮಿಕ ಭಾವನೆಗೆ ಧಕ್ಕೆ ತಂದು ಪ್ರಕರಣವನ್ನು ತಿರುಚಿದವರ ವಿರುದ್ದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಹಿಂದೂ ಬಂಧುಗಳ ಪರವಾಗಿ ಪೊಲೀಸ್ ಇಲಾಖೆಯಲ್ಲಿ ಪುತ್ತಿಲ ಪರಿವಾರ ಮನವಿ ಮಾಡಿದೆ.

LEAVE A REPLY

Please enter your comment!
Please enter your name here