ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್‌ನಲ್ಲಿ ವಿಕಲಚೇತನರ ವಿಶೇಷ ಗ್ರಾಮಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ವಿಶೇಷ ಗ್ರಾಮಸಭೆಯ ಉದ್ದೇಶ ಹಾಗೂ ಶೇ.5 ಅನುದಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ವಿಕಲಚೇತನರ ಬಹುಮಟ್ಟದ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಲೀಲಾವತಿ ಸಹಕರಿಸಿದರು. ಉಪ್ಪಾದ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ, ರಾಮಣ್ಣ ಗೌಡ ಗುಂಡೋಲೆ, ರಾಮಚಂದ್ರ ಪೂಜಾರಿ ಉಪಸ್ಥಿತರಿದ್ದರು. ವಿಕಲಚೇತನರು, ವಿಕಲಚೇತನರ ಆರೈಕೆದಾರರು, ಆಶಾಕಾರ್ಯಕರ್ತರು, ಎಂಡೋಪೀಡಿತ ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.