ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸರಣಿ ಕಾರ್ಯಕ್ರಮ-” ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ “

0

ಪುತ್ತೂರು:ತೆಂಕಿಲ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಅಯೋಧ್ಯಾ  ರಾಮ’ ಸರಣಿ ಕಾರ್ಯಕ್ರಮದ ಅಂಗವಾಗಿ ” ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜ.16ರಂದು ನಡೆಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಯಕ್ಷಗಾನ ಅರ್ಥಧಾರಿ  ಹರೀಶ್ ಬಳಂತಿಮೊಗರು ಇವರು ಆಗಮಿಸಿ ಪ್ರಭು ಶ್ರೀರಾಮನ ಜೀವನ ಗಾಥೆಯನ್ನು ಶ್ರೀರಾಮಚಂದ್ರನಲ್ಲಿರುವ  ಹದಿನಾರು ಗುಣಗಳ ಮೂಲಕ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ವಹಿಸಿ, ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುರಳೀಕೃಷ್ಣ ಕೆ. ಉಪಸ್ಥಿತರಿದ್ದರು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಹರಿಪ್ರಸಾದ್ ಸ್ವಾಗತಿಸಿ, ಕವನ ವಂದಿಸಿದರು. ಸಾಯಿಶಂಕರಿ ನಿರೂಪಿಸಿದರು.ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here