ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಜ.13ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಉಪ್ಪಿನಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ.ವಿ.ಅವರು ‘ನಾಗರಿಕ ಶಿಷ್ಟಾಚಾರ’ದ ಕುರಿತು ಮಾಹಿತಿಯನ್ನು ನೀಡಿದರು. ಇನ್ನೋರ್ವ ಅತಿಥಿ ವಕೀಲ ರಶ್ಮಿಅಶೋಕ್ ಅವರು ‘ ಕಾನೂನು ಅರಿವು ‘ ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ, ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಾಪಕ ಸುಬ್ರಾಯ ಪಣಚ ಅವರು, ವಿವೇಕಾನಂದ ಜಯಂತಿಯ ಪ್ರಯುಕ್ತ ಸ್ವಾಮೀಜಿಯವರ ಬದುಕಿನ ಸ್ವಾರಸ್ಯಕರ ಘಟನೆಗಳ ಕುರಿತಾಗಿ ಮಾತನಾಡಿದರು. ವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಗಣೇಶ್ ವಾಗ್ಲೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರೇಷ್ಮಾ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.