ಜ.20- 21: ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ- ಪೂರ್ವಭಾವಿ ಸಭೆ 

0

ಸವಣೂರು :  ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಜ. 20 ಮತ್ತು 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸವಣೂರು ಗ್ರಾ.ಪಂ.ನ ಕುಮಾರಧಾರಾ ಸಭಾಂಗಣದಲ್ಲಿ ಜ.17ರಂದು ಪೂರ್ವ ಸಿದ್ದತಾ ಸಭೆ ನಡೆಯಿತು.ಸಭೆಯಲ್ಲಿ ಕಡಬ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಕಾರ್ಯಕ್ರಮದ ಕುರಿತು ಹಾಗೂ ವಿವಿಧ ಸಮಿತಿಗಳ ಕುರಿತು ಸಲಹೆ ನೀಡಿದರು.

ರಾಕೇಶ್ ರೈ ಕೆಡೆಂಜಿ ಅವರು ,ಜಿಲ್ಲಾ ಯುವಜನ ಮೇಳ ಯಶಸ್ವಿ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಸವಣೂರು ಗ್ರಾ.ಪಂ.ನ ಎಲ್ಲಾ ಸದಸ್ಯರು ಉತ್ತಮ ಸಹಕಾರ ನೀಡುತ್ತಿದ್ದಾರೆ.ಯುವಜನ ಮೇಳ ಸಾಂಸ್ಕೃತಿಕ ಉತ್ಸವವಾಗಿ ನಡೆಯುವ ನಿಟ್ಟಿನಲ್ಲಿ ಜಾತಿ ಧರ್ಮ ರಾಜಕೀಯ ಮರೆತು ಎಲ್ಲರೂ ಜತೆಯಾಗಬೇಕು ಎಂದರು.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಅವರು ಒಟ್ಟು ಕಾರ್ಯಕ್ರಮ ಹಾಗೂ ವಿವಿಧ ಸಮಿತಿಗಳ ವಿವರ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಯುವಜನ ಮೇಳದ ನೋಡಲ್ ಅಧಿಕಾರಿ ಮಾಮಚ್ಚನ್ ಎಂ., ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್, ಅಭಿವೃದ್ಧಿ ಅಧಿಕಾರಿ ಸಂದೇಶ್ ಕೆ.ಎನ್ ಉಪಸ್ಥಿತರಿದ್ದರು.ಸಭೆಯಲ್ಲಿ ಗ್ರಾ.ಪಂ.ಸದಸ್ಯರು ,ಸಿಬಂದಿಗಳು,ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಸಂಜೀವಿನಿ ಒಕ್ಕೂಟದ ಸದಸ್ಯರು, ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸವಣೂರು ಗ್ರಾ.ಪಂ.ಲೆಕ್ಕಾಧಿಕಾರಿ ಎ.ಮನ್ಮಥ ಸ್ವಾಗತಿಸಿ, ಸಿಬ್ಬಂಧಿ ದಯಾನಂದ ಎಂ. ವಂದಿಸಿದರು.

LEAVE A REPLY

Please enter your comment!
Please enter your name here