ಜ. 21: ಆಲಂಕಾರಿನಲ್ಲಿ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ಶಾಖೆ ಉದ್ಘಾಟನೆ

0

ಕಡಬ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸತತ 3 ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಆಲಂಕಾರು ಶಾಖೆಯ ಉದ್ಘಾಟನಾ ಸಮಾರಂಭವು ಜ.21 ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಜರಗಲಿದೆ ಎಂದು ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ತಿಳಿಸಿದ್ದಾರೆ.


ಅವರು ಬುಧವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದ್ದು, ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ಉದ್ಯಮಿ ಜಿ. ಕೃಷ್ಣಪ್ಪ ರಾಮಕುಂಜ ಅವರು ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಆಲಂಕಾರು ಗ್ರಾ.ಪಂ. ಅಧ್ಯಕ್ಷ ಸುಶೀಲಾ ಗೌಡ ಪ್ರಥಮ ಠೇವಣಿ ಪತ್ರ ಹಾಗೂ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು, ಕಡಬ ಸ್ಪಂದನಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕೇಶವ ಗೌಡ ಅಮೈ ಹಾಗೂ ಆಲಂಕಾರು ಶ್ರೀದುರ್ಗಾ ಟವರ‍್ಸ್‌ನ ಮಾಲಕ ರಾಧಾಕೃಷ್ಣ ರೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪಿ.ಸಿ.ಜಯರಾಮ ಅವರು ವಿವರಿಸಿದರು.

ರಜತ ಸಂಭ್ರಮ 25 ಶಾಖೆಗಳನ್ನು ಹೊಂದುವ ಗುರಿ:
ಸೊಸೈಟಿಯು ಆರಂಭಗೊಂಡು 25 ವರ್ಷಗಳಾಗುತ್ತಿದ್ದು, ಆದರ ಅಂಗವಾಗಿ 25 ಶಾಖೆಗಳನ್ನು ಹೊಂದುವ ಗುರಿ ಇರಿಸಿಕೊಂಡು ರಜತ ಸಂಭ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. 1997 ರಲ್ಲಿ ಸುಳ್ಯದ ಗೌಡರ ಯುವ ಸೇವಾ ಸಂಘದಿಂದ ಪ್ರವರ್ತಿಸಲ್ಪಟ್ಟು, ಆರಂಭದಲ್ಲಿ 435 ಜನರಿಂದ ಪ್ರಾರಂಭವಾದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಪ್ರಸ್ತುತ 16116 ಸದಸ್ಯರನ್ನು ಹೊಂದಿದೆ. ಸದಸ್ಯರಿಂದ 4.69 ಕೋಟಿ ರೂ. ಪಾಲು ಬಂಡವಾಳ ಸಂಗ್ರಹಿಸಿದ್ದು, ಸದಸ್ಯರ ಅನುಕೂಲಕ್ಕಾಗಿ ವಾಹನ ಸಾಲ, ಚಿನ್ನಾಭರಣ ಈಡಿನ ಸಾಲ, ಭದ್ರತಾ ಸಾಲ, ಗೃಹ ಸಾಲ, ವಾಣಿಜ್ಯ ಕಟ್ಟಡ ಸಾಲ, ಜಮೀನು ಖರೀದಿ ಸಾಲ, ಜಮೀನು ಅಡವು ಸಾಲ, ವೇತನ ಸಾಲ, ವ್ಯಾಪಾರ ಸಾಲ ಹಾಗೂ ಜಾಮೀನು ಸಾಲಗಳನ್ನು ನೀಡುತ್ತಿದ್ದು, ಇ-ಸ್ಟಾಂಪಿಂಗ್ ವಿತರಣೆ, ಆರ್‌ಟಿಜಿಎಸ್/ನೆಫ್ಟ್ ಸೌಲಭ್ಯವನ್ನು ನೀಡುತ್ತಿದೆ. ರಾಜ್ಯಮಟ್ಟದ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಸೊಸೈಟಿಯು ಈಗಾಗಲೇ ರಾಜ್ಯದ ವಿವಿಧೆಡೆ 22 ಶಾಖೆಗಳನ್ನು ಹೊಂದಿದೆ. ಆರಂಭದಿಂದಲೂ ಲಾಭದಾಯಕವಾಗಿ ಮುನ್ನಡೆಯುತ್ತಿರುವ ಸಂಸ್ಥೆಯು ಸದಸ್ಯರಿಗೆ ಆಕರ್ಷಕ ಡಿವಿಡೆಂಟ್ ವಿತರಿಸುತ್ತಿದೆ. ಪ್ರಸ್ತುತ 190 ಕೋಟಿ ರೂ. ಠೇವಣಿ ಇದ್ದು, 180 ಕೋಟಿ ರೂ. ಸಾಲಗಳನ್ನು ಸದಸ್ಯರಿಗೆ ವಿತರಿಸಿದೆ. ರೂ. 206 ಕೋಟಿ ದುಡಿಯುವ ಬಂಡವಾಳವಿದ್ದು, ಒಟ್ಟು ರೂ. 900 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸುತ್ತಿದೆ ಎಂದು ಪಿ.ಸಿ.ಜಯರಾಮ ಮಾಹಿತಿ ನೀಡಿದರು.
ಸೊಸೈಟಿಯ ಉಪಾಧ್ಯಕ್ಷ ಮೋಹನ್‌ರಾಮ್ ಸುಳ್ಳಿ, ನಿರ್ದೇಶಕರಾದ ಎ.ವಿ.ತೀರ್ಥರಾಮ, ಕೆ.ಸಿ.ನಾರಾಯಣ ಗೌಡ, ಪಿ.ಎಸ್. ಗಂಗಾಧರ, ಹೇಮಚಂದ್ರ ಐ.ಕೆ., ಮುಖ್ಯ ಪತ್ರಿಕಾಗೋಷ್ಠಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here