ಆಲಂಕಾರು: ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಪಿಕ್ ಅಪ್ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ನಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿ ಪೊನ್ನುರಾಜ್ (ರಜನೀಶ್) ಎಂದು ಗುರುತಿಸಲಾಗಿದೆ. ರಜನೀಶ್ ರಸ್ತೆ ದಾಟುತ್ತಿದ್ದ ವೇಳೆ ಪಿಕ್ ಅಪ್ ಡಿಕ್ಕಿಯಾಗಿದೆ. ರಸ್ತೆಯಲ್ಲಿ ವಾಹನಗಳನ್ನು ಬೇಕಾಬಿಟ್ಟಿ ಪಾರ್ಕಿಂಗ್ ಮಾಡಿರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ, ಅಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.