ಮೇನಾಲ ಮಧುರಾ ಇಂಟರ್ ನ್ಯಾಶನಲ್ ಸ್ಕೂಲ್ ನ ವಾರ್ಷಿಕ ಕ್ರೀಡಾಕೂಟ

0

ಮೇನಾಲ ಮಧುರಾ ಇಂಟರ್ ನ್ಯಾಶನಲ್ ಸ್ಕೂಲ್ ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು.
ಗಿಡಕ್ಕೆ ನೀರು ಉಣಿಸುವ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆದು, ಬಳಿಕ ಶಾಲಾ ವಿದ್ಯಾರ್ಥಿನಾಯಕಿ ಕು.
ಫಾತಿಮತ್ ಮುಭಾಶಿರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಇಬ್ರಾಹಿಂ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕ್ರಿಡಾಳುಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ, ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರೆಹಮಾನ್, ಸಹಾಯಕ ಮುಖ್ಯ ಶಿಕ್ಷಕಿ ಕು.ಶ್ವೇತಾಮರಿಯ ಡಿʼಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳಿಗೆ ಶಾಲೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಸ್ಮರಣಿಕೆ ನೀಡಿ ಗೌರವಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಶಿಕ್ಷಕಿ ಶಫ್ರಿನಾ ಪಿ.ವಿ ಸ್ವಾಗತಿಸಿ, ಶಿಕ್ಷಕಿ ಪ್ರತೀಕ್ಷ ವಂದಿಸಿದರು. ಶಿಕ್ಷಕಿ ಶೇಕ್ ಝಹಿರಾಬಾನು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.









LEAVE A REPLY

Please enter your comment!
Please enter your name here