ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜ್ ಮತ್ತು ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಜೊತೆ ಶೈಕ್ಷಣಿಕ ಒಡಂಬಡಿಕೆ

0

ರಾಮಕುಂಜ: ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜ್ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಡಳಿತ ಮಂಡಳಿಯೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಕೆನರಾ ಕಾಲೇಜಿನ ವಿಶೇಷ ಪರಿಣಿತರು ಮುಂದಿನ ಎಲ್ಲಾ ಶೈಕ್ಷಣಿಕ ವರ್ಷದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಾಜೆಕ್ಟ್, ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಕೋಡಿಂಗ್ ಗಳ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಲಿದ್ದಾರೆ.ವಿದ್ಯಾರ್ಥಿಗಳ ಕಲಿಕೆಗೆ ಸಹಾಯವಾಗುವಂತೆ ಮುಂದಿನ ಹಂತದಲ್ಲಿ ಹೆಚ್ಚಿನ ಪ್ರಾಜೆಕ್ಟ್ ಮಾಡಲು ಮಾರ್ಗದರ್ಶನವನ್ನು ಸಂಸ್ಥೆ ನೀಡಲಿದೆ. ಈ ಒಡಂಬಡಿಕೆ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here