ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.20 ರಿಂದ ಆರಂಭಗೊಂಡು 23 ರ ತನಕ ವಿಜೃಂಭಣೆಯಿಂದ ಜರಗಲಿದೆ. ಜ.20 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ಭಕ್ತಾಧಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಜ.21 ರಂದು ಬೆಳಿಗ್ಗೆ ಆಶ್ಲೇಷ ಬಲಿಪೂಜೆ, ನಾಗನ ಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ, ಶ್ರೀ ಮಹಾವಿಷ್ಣು ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ಶ್ರೀ ಷಣ್ಮುಖದೇವ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ದುಗ್ಗಳದಿಂದ ಶ್ರೀ ಉಳ್ಳಾಕ್ಲು ದೈವದ ಭಂಡಾರವು, ನಾಲಕದಿಂದ ಶ್ರೀ ರಾಜನ್ ದೈವ(ಶಿರಾಡಿ)ದ ಭಂಡಾರವು ಹೊರಟು ಶ್ರೀ ದೇವರ ಸನ್ನಿಧಿಗೆ ಆಗಮಿಸುವುದು, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ರಥೋತ್ಸವ, ಕಟ್ಟೆಪೂಜೆ, ಅಶ್ವತ್ಥ ಕಟ್ಟೆಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಜ.22 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ರಥೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈಧಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಇರ್ವೆರು ಉಳ್ಳಾಕ್ಲುರವರ ಭಂಡಾರ ದುಗ್ಗಳಕ್ಕೆ ನಿರ್ಗಮನ ಕಾರ್ಯಕ್ರಮ ನಡೆಯಲಿದೆ. ರಾತ್ರಿ ರಂಗಪೂಜೆ, ವ್ಯಾಘ್ರ ಚಾಮುಂಡಿ, ವಾರಾಹಿ ದೈವದ ನೇಮೋತ್ಸವ, ಕಾಣಿಕೆ, ಹರಕೆ ಸಮರ್ಪಣೆ, ಪ್ರಸಾದ ವಿತರಣೆ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಜ.23 ರಂದು ಬೆಳಿಗ್ಗೆ ಶ್ರೀ ರಕ್ತೇಶ್ವರಿ, ಧೂಮ್ರ-ಧೂಮಾವತಿ ಮತ್ತು ಶಿರಾಡಿ ದೈವಗಳ ನೇಮ ನಡಾವರಿ, ಕಾಣಿಕೆ ಹರಕೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮ
ಜಾತ್ರೋತ್ಸವದ ಅಂಗವಾಗಿ ಜ.20 ರಂದು ಸಂಜೆ ಗಾನ ಸರಸ್ವತಿ ಸಂಗೀತ ಕಲಾ ಶಾಲೆ ನೆಹರುನಗರ ಪುತ್ತೂರು ಇವರಿಂದ ಸಂಗೀತ ಕಾರ್ಯಕ್ರಮ, ಜ.21 ರಂದು ಸಂಜೆ ಸಮರ ಸೌಗಂಧಿಕಾ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗುವಂತೆ ಪ್ರಧಾನ ಅರ್ಚಕ ಜಯರಾಮ ಬಡೆಕಿಲ್ಲಾಯ, ಉತ್ಸವ ಸಮಿತಿ ಅಧ್ಯಕ್ಷ ತೀರ್ಥಾನಂದ ಗೌಡ ದುಗ್ಗಳ, ಆಡಳಿತಾಧಿಕಾರಿ ಮಂಜುನಾಥ ಬಿ, ವ್ಯವಸ್ಥಾಪನಾ ಸಮಿತಿಯ ಪ್ರಭಾರ ಅಧ್ಯಕ್ಷ ನೇಮಿರಾಜ ಪಾಂಬಾರು ಹಾಗೂ ಉಪಸಮಿತಿ ಸದಸ್ಯರು, ಊರಿನ ಸಮಸ್ತ ಭಕ್ತಾಭಿಮಾನಿಗಳು, 1ಕವಳೆ, 4 ಸ್ಥಳಮನೆ ಮತ್ತು 16 ಬಾರಿಕೆ ಮನೆತನಗಳ ಮುಖ್ಯಸ್ಥರ ಪ್ರಕಟಣೆ ತಿಳಿಸಿದೆ.