ಜ.22ರಿಂದ(ನಾಳೆ): ಆರ್ಯಾಪು ಪಂಚಾಯತ್ ಸಭಾಂಗಣದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಪುತ್ತೂರು : ಗ್ರಾಮ ಪಂಚಾಯತ್ ಆರ್ಯಾಪು ಹಾಗೂ ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಜ.22ರಿಂದ ಫೆ.2 ರ ವರೆಗೆ, ಸುಮಾರು 15 ದಿನಗಳ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಕಾರ್ಯಕ್ರಮ ನಡೆಯಲಿದೆ.
ಯಾವುದೇ ರೀತಿಯ ಔಷಧವಿಲ್ಲದೆಯೇ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗಳಿಗೆ ಉಚಿತ ಥೆರಫಿಯೂ ಪ್ರತಿದಿನವೂ ಬೆ.9 -30ರಿಂದ ಸಂಜೆ 4-30 ರ ವರೆಗೆ ನಡೆಯಲಿದೆ. ಜ.22ರಂದು ನಡೆಯುವ ಶಿಬಿರದ ಉದ್ಘಾಟನೆಯನ್ನು ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ನೆರವೇರಿಸಿ, ಅಧ್ಯಕ್ಷತೆಯನ್ನು ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಗೀತಾ ವಹಿಸಲಿದ್ದಾರೆ.

ಶಿಬಿರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಕಲ್ಲಾರೆ ಇದರ ಮುಖ್ಯಸ್ಥರಾಗಿರುವ ಕೆ. ಪ್ರಭಾಕರ ಸಾಲ್ಯಾನ್ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಆರ್ಯಾಪು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಆಶೋಕ್ ನಾಯ್ಕ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಉಚಿತ ಥೆರಪಿಯ ಪ್ರಯೋಜನ ಪಡೆದು ಕೊಳ್ಳುವಂತೆ ಸಂಸ್ಥೆ ಮುಖ್ಯಸ್ಥ ಕೆ.ಪ್ರಭಾಕರ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here