ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೆ-ಅಯೋಧ್ಯೆ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ನೇರ ಪ್ರಸಾರ

0

ಬಡಗನ್ನೂರುಃ  ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಇದರ ಆಶ್ರಯದಲ್ಲಿ ಅಯೋಧ್ಯೆಯ ಶ್ರೀ ರಾಮಲಲ್ಲಾ (ಬಾಲರಾಮನ) ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪಣೆಯ ಅಂಗವಾಗಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಜ.22 ರಂದು ಬೆಳಗ್ಗೆ  ಗಂಟೆ 8 ರಿಂದ 11ತನಕ ಭಜನಾ ಕಾರ್ಯಕ್ರಮ, 11 ರಿಂದ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮಲಲ್ಲಾನ ನೂತನ ವಿಗ್ರಹದ ಪಾಣ ಪ್ರತಿಷ್ಠಾಪಣೆಯ ನೇರ ಪ್ರಸಾರ, 12.30ಕ್ಕೆ ದೇವಳದಲ್ಲಿ ಮಹಾಪೂಜೆ, ಬಳಿಕ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೆರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ  ಶ್ರೀನಿವಾಸ ಭಟ್‌ ಚಂದು ಕೂಡ್ಲು ಹಾಗೂ ಉತ್ಸವ ಸಮಿತಿ ಅಧ್ಯಕ್ಷ ಸತೀಶ್‌ ರೈ ಕಟ್ಟಾವು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here