ಜ.22: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆ

0

ಭಜನೆ, ಬಲಿವಾಡು ಕೂಟ, ಕರಸೇವಕರಿಗೆ ಗೌರವಾರ್ಪಣೆ
ಪುತ್ತೂರು : ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಭಜನಾ ಕಾರ್ಯಕ್ರಮ, ಬಲಿವಾಡು ಕೂಟ ಹಾಗೂ ಕರಸೇವೆಯಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 8.30ರಿಂದ ಬೆಟ್ಟಂಪಾಡಿ ಗ್ರಾಮದ ಎಲ್ಲಾ ಭಜನಾ ಸಂಘದ ಸದಸ್ಯರು ಹಾಗೂ ಭಕ್ತಾದಿಗಳಿಂದ ಭಜನೆ, ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯೊಂದಿಗೆ ಶ್ರೀರಾಮನಾಮ ತಾರಕ ಮಂತ್ರ ಹಾಗೂ ಹನುಮಾನ್ ಚಾಲಿಸಾ ಪಠಣ, ಮಹಾಪೂಜೆ, ಪ್ರಸಾದ ವಿತರಣೆ, ಅಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here