ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಎಸ್ಪಿ ರಿಷ್ಯಂತ್ ಸಿ.ಬಿ.

0

ಪುತ್ತೂರು: (ಜ.22ರ) ಇಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಟೆ, ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಕೆ.ಎಸ್.ಆರ್.ಪಿ ಪಡೆ ಹಾಗೂ ಡಿ.ಎ.ಆರ್ ಪಡೆಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ ಹಾಗೂ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ, ಆಯಾ ಠಾಣಾ ಪೊಲೀಸರಿಂದ ಹಗಲು ಗಸ್ತು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆಯೂ ನಿರಂತರವಾಗಿ ನಿಗಾವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ರೀತಿಯ ಅಕ್ಷೇಪಾರ್ಹ ಬರಹ ಅಥವಾ ಭಿತ್ತಿಚಿತ್ರಗಳನ್ನು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ತುರ್ತು ಸಂಪರ್ಕಕ್ಕಾಗಿ: ದ.ಕ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 0824 2220500 ಅಥವಾ 112 ಸಹಾಯವಾಣಿಗೆ ಕರೆ ಮಾಡುವಂತೆ ರಿಷ್ಯಂತ್ ಸಿಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here