ಆರ್ಯಾಪು ಪಂಚಾಯತ್ ಸಭಾಂಗಣದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಪುತ್ತೂರು : ಗ್ರಾಮ ಪಂಚಾಯತ್ ಆರ್ಯಾಪು ಹಾಗೂ ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಜ.22ರಿಂದ ಫೆ.2ರ ವರೆಗೆ ಸುಮಾರು 15 ದಿನಗಳ ಕಾಲ ನಡೆಯಲಿರುವ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.22ರಂದು ಆರ್ಯಾಪು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಗೀತಾ ದೀಪ ಪ್ರಜ್ವಲನೆ ಮೂಲಕ ನೆರವೇರಿಸಿ, ಶುಭ ಕೋರಿದರು. ಆರ್ಯಾಪು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ, ಪಂಚಾಯತ್ ಸದಸ್ಯ ಯಾಕುಬ್, ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಮುಖ್ಯಸ್ಥರಾದ ಪ್ರಭಾಕರ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯಾವುದೇ ರೀತಿಯ ಔಷಧವಿಲ್ಲದೆಯೇ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗಳಿಗೆ ಉಚಿತ ಥೆರಫಿಯೂ ಪ್ರತಿದಿನವೂ ಬೆ.9 -30 ರಿಂದ ಸಂಜೆ 4-30 ರ ವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಭಾಕರ್ ಸಾಲ್ಯಾನ್ ವಿನಂತಿಸಿದರು.

LEAVE A REPLY

Please enter your comment!
Please enter your name here