ಬಡಗನ್ನೂರು: ಅಯೋಧ್ಯೆಯ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಜ.22ರಂದು ಬೆಳಗ್ಗೆ ಗಂ.8ರಿಂದ 11ತನಕ ವಿವಿಧ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾನ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಬಳಿಕ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಸುಡುಮದ್ದು ಪ್ರದರ್ಶಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೆರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ಉತ್ಸವ ಸಮಿತಿ ಅಧ್ಯಕ್ಷ ಸತೀಶ್‌ರೈ ಕಟ್ಟಾವು ಕಾರ್ಯದರ್ಶಿ ಜನಾರ್ದನ ಪೂಜಾರಿ ಪದಡ್ಕ, ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಉಪಾಧ್ಯಕ್ಷೆ ಸುಶೀಲ ಪಕ್ಯೋಡ್, ಸದಸ್ಯರಾದ ಸಂತೋಷ್ ಆಳ್ವ ಗಿರಿಮನೆ, ಸುಜಾತ ಮೈಂದನಡ್ಕ, ಸುಧಾಕರ ಶೆಟ್ಟಿ ಮಂಗಳಾದೇವಿ, ಅಚ್ಚುತ ಭಟ್ ಬೀರಮೂಲೆ, ಪ್ರಭಾಕರ ಗೌಡ ಕನ್ನಯ, ಬಡಗನ್ನೂರು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಸೀತಾರಮ ಗೌಡ ಉಳಯ, ಶಂಕರ ನಾರಾಯಣ ಭಟ್ ಕನ್ನಡ್ಕ, ಕುಂಬ್ರ ಸಹಕಾರಿ ಸಂಘದ ನಿರ್ದೇಶಕ ರಘುರಾಮ ಪಾಟಾಳಿ, ರಾಮಣ್ಣ ಗೌಡ ಬಸವಹಿತ್ತಿಲು ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ದರು.
ಸನ್ಮಾನ:
ಅಯೋಧ್ಯೆ ರಾಮಮಂದಿರದ ಕರಸೇವೆಯಲ್ಲಿ ಭಾಗವಹಿಸಿದ್ದ ಕೃಷಿಕ ಸುರೇಶ ಎಸ್ ಕೊಲ್ಯ, ಸಂತೋಷ್ ಬಿ, ಗಣಪತಿ ಗೌಡ ಕೋಡಿಯಡ್ಕ, ರಾಮಚಂದ್ರ ಭಟ್ ಚಂದುಕುಡ್ಲು, ಶಿವಪ್ಪ ಶಬರಿನಗರ ಸುಳ್ಯಪದವು ಅವರನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಅಭಿನಂದಿಸಲಾಯಿತು.