ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಯೋಧ್ಯೆ ಶ್ರೀ ರಾಮನ ಪ್ರಾಣಪ್ರತಿಷ್ಠೆ ಸಂಭ್ರಮ

0

ಪುತ್ತೂರು: ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವನ್ನು ಬನ್ನೂರು ಕೃಷ್ಣ ನಗರ ಅಲುಂಬುಡ ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಲ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಶುಭ ಹಾರೈಸಿದರು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಕಳುವಾಜೆ ಮಕ್ಕಳಿಗೆ ಶ್ರೀರಾಮನ ಕಥೆಯನ್ನು ತಿಳಿಸುವ ಮೂಲಕ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವನ್ನು ಸ್ಮಾರ್ಟ್ ಟಿವಿ ಮೂಲಕ ಮಕ್ಕಳಿಗೆ ತೋರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ಎ.ವಿ. ನಾರಾಯಣ, ಉಪಾಧ್ಯಕ್ಷ ಉಮೇಶ್ ಮಳುವೆಲು, ಶಾಲೆಯ ಪ್ರಾಂಶುಪಾಲೆ ಉಷಾ ಕಿರಣ ಉಪಸ್ಥಿತರಿದ್ದರು. ಶಿಕ್ಷಕರಾದ ವನಿತಾ, ಯಶುಭ ರೈ, ಸಹಾಯಕಿ ಭುವನೇಶ್ವರಿ, ಶಾಲಾ ವಾಹನ ಚಾಲಕ ಆನಂದ್ ಸಹಕರಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಉಷಾ ಕಿರಣ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here