ಪುತ್ತೂರು: ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀಬಾಲರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ಮಿಷನ್ ಮೂಲೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಮ ಭಕ್ತರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಕೇತ್ರದಲ್ಲಿ ವಿಶೇಷ ಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
