ಜ.28ಕ್ಕೆ ಉಜಿರೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ 2064 ಹುದ್ದೆಗಳಿಗೆ ಲಿಖಿತ ಪರೀಕ್ಷೆ

0

ಸಾಂದರ್ಭಿಕ ಚಿತ್ರ

ಪುತ್ತೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,೦64 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ಗಂಟೆ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳು ಕರೆ ಪತ್ರ ಮುಂಬರುವ ದಿನಗಳಲ್ಲಿ ಎಸ್‌ಎಮ್‌ಎಸ್ ಮೂಲಕ ಮಾಹಿತಿ ನೀಡಲಾಗುವುದು ಮತ್ತು ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿ ನಮೂದಿಸಿರುವ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗದಿಪಡಿಸಿದ ದಿನಾಂಕದಂದು ಹಾಜರಾಗುವುದು. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿದಂತೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಕೇಂದ್ರಗಳಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಪಿ.ಜಿ.ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸಿಬಿಎಸ್‌ಐ ಸ್ಕೂಲ್‌ನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here