ರಾಮಕುಂಜ ದೇವಸ್ಥಾನದ ವಾರ್ಷಿಕ ಜಾತ್ರೆ-ಹೊರೆಕಾಣಿಕೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.23ರಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಜರೊಕ್ಕುವಿನಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀರಾಮಕುಂಜೇಶ್ವರ ದೇವಸ್ಥಾನದ ಪವಿತ್ರಪಾಣಿ ನರಹರಿ ಉಪಾಧ್ಯಾಯ ಈರಕಿಮಠ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್, ಶ್ರೀ ರಾಮಕುಂಜೇಶ್ವರ ಸಂಸ್ಕೃತ ಶಾಲಾ ವಿದ್ಯಾರ್ಥಿಗಳು ಭಜನೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಜಾತ್ರೋತ್ಸವದ ಅಂಗವಾಗಿ ಮಧ್ಯಾಹ್ನ ಬಲಿಹೊರಟು ಉತ್ಸವ ನಡೆಯಿತು.

LEAVE A REPLY

Please enter your comment!
Please enter your name here