





ಪುತ್ತೂರು: ತಿಂಗಳ ಹಿಂದೆಯಷ್ಟೆ ಗಡಿಪಾರು ಆದೇಶಕ್ಕೆ ಒಳಗಾಗಿದ್ದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಅವರಿಗೆ ಇದೀಗ ಎರಡನೇ ಭಾರಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೋಟೀಸ್ ಜಾರಿ ಮಾಡಿದ್ದಾರೆ.


ಶಾಂತಿಗೋಡು ಗ್ರಾಮದ ಪಂಜಿಗ ದಿ.ಲೋಕಪ್ಪ ಗೌಡ ಅವರ ಪುತ್ರ ದಿನೇಶ್ ಪಂಜಿಗ(32ವ) ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ವಿಜಯಪುರ ಜಿಲ್ಲೆಯ – ಸಿಂಧಗಿ ಇವರನ್ನು ಕರ್ನಾಟಕ ಪೊಲೀಸ್ ಕಾಯ್ದೆ-1963 ಕಲಂ 55 ರ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24 ಪೂರ್ವಾಹ್ನ :11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ.






ಈ ಪ್ರಕರಣದಲ್ಲಿ ನೀವು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದ್ದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ ಗಡಿಪಾರು ನೊಟೀಸ್:
ದಿನೇಶ್ ಪಂಜಿಗ ಅವರಿಗೆ ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದರು. ಈ ವಿಚಾರದಲ್ಲಿ ದಿನೇಶ್ ಪಂಜಿಗ ಅವರು ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಎರಡನೇ ಭಾರಿ ಗಡಿ ಪಾರು ಆದೇಶ ನೊಟೀಸ್ ನೀಡಲಾಗಿದೆ.







