ಪುತ್ತೂರು: ಪುತ್ತೂರಿನ 2ನೇ ಜಾತ್ರೆಯಾಗಿ ಮೂಡಿ ಬರುತ್ತಿರುವ ಕಾರಣಿಕದ ಪ್ರಸಿದ್ಧ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.24ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವದ ಅಂಗವಾಗಿ ಮಧ್ಯಾಹ್ನ ಸಹಸ್ರಾರು ಮಂದಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಿತು.
ಬೆಳಿಗ್ಗೆ ಗಂಟೆ 9ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, ಬಳಿಕ ಗಂಟೆ 11.30ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ ಮತ್ತು ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ನಡೆದ ಬಳಿಕ ಮಧ್ಯಾಹ್ನ ಗಂಟೆ 12.30ರಿಂದ ಕಲ್ಲೇಗ ದೈವಸ್ಥಾನದಲ್ಲಿ ಅನ್ನಸಂತರ್ಪಣೆ ನಡೆಯಿತು.