ಪುತ್ತೂರು: ಹತ್ತು ಹಲವು ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಕುಂಬ್ರ ವರ್ತಕರ ಸಂಘವು ತನ್ನ 20 ವರ್ಷದ ಸಂಭ್ರಮಾಚರಣೆಯ ವರ್ಷದಲ್ಲಿ ಒಳಮೊಗ್ರು ಗ್ರಾ.ಪಂಗೆ ಸೇರಿದ ಸಾರ್ವಜನಿಕ ಗ್ರಂಥಾಲಯಕ್ಕೆ ಕೇರಂ ಬೋರ್ಡ್ ನ್ನು ಜ.23ರಂದು ಕೊಡುಗೆಯಾಗಿ ನೀಡಿತು. ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯಯವರು ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರಿಗೆ ಕೇರಂ ಬೋರ್ಡ್ ನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ತ್ರಿವೇಣಿ, ಕುಂಬ್ರ ವರ್ತಕರ ಸಂಘವು ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಒಂದು ಒಳ್ಳೆಯ ಸಂಘವಾಗಿದೆ ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು. ಗ್ರಂಥಪಾಲಕಿ ಸಿರಿನಾ ವರ್ತಕರ ಸಂಘಕ್ಕೆ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಕಾರ್ಯದರ್ಶಿ ಜಯಂತಿ, ಕುಂಬ್ರ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್ಸುಂದರ ರೈ ಕೊಪ್ಪಳ, ಪಂಚಾಯತ್ ಸದಸ್ಯರುಗಳಾದ ಮಹೇಶ್ ರೈ ಕೇರಿ, ಶಾರದಾ, ಚಿತ್ರಾ, ವರ್ತಕರ ಸಂಘದ ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕುರಿಕ್ಕಾರ, ದಿವಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಭವ್ಯ ರೈ, ಜತೆ ಕಾರ್ಯದರ್ಶಿ ಚರಿತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.