ಜ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

0

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜ.26ರಂದು ಭೇಟಿ ನೀಡಲಿದ್ದಾರೆ.

ಜ.26ರಂದು ಧರ್ಮಸ್ಥಳದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ.27ರಂದು ಕುಕ್ಕೆ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಸ್ತೆ ಮಾರ್ಗದ ಮೂಲಕ ಬಿಳೆನೆಲೆ ಹೆಲಿಪ್ಯಾಡ್ ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here