ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಪ್ರಸ್ತುತ ಪುತ್ತಿಲ ಪರಿವಾರದ ಮುಖ್ಯಸ್ಥರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ. ಬೆಂಗಳೂರಿನಲ್ಲೇ ಅರುಣ್ ಕುಮಾರ್ ಪುತ್ತಿಲ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕುರಿತು ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ರಾಜ್ಯ ಬಿಜೆಪಿ ನಾಯಕರು ಯಶಸ್ವಿಯಾಗಿರುವ ಬೆನ್ನಲ್ಲೇ ಒಂದೆರಡು ದಿನಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರೂ ಮತ್ತೆ ಬಿಜೆಪಿಗೆ ಸೇರುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಸಾಂಕೇತಿವಾಗಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇರ್ಪಡೆ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ಮೀಟಿಂಗ್:
ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗುತ್ತಿದ್ದಂತೆಯೇ ಪುತ್ತೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಪಕ್ಷದ ಕೆಲ ನಾಯಕರು ಸೇರಿ ಸಭೆ ನಡೆಸಿ, ಈ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಸಂಜೆಯಿಂದ ರಾತ್ರಿಯ ತನಕ ಸಭೆಯಲ್ಲಿ ನಡೆದಿದ್ದು, ಪಕ್ಷದ ಕೆಲ ಹಿರಿಯರು ಸಭೆಯಲ್ಲಿ ಭಾಗವಹಿಸಿದ್ದರೆಂದು ಮಾಹಿತಿ ಲಭ್ಯವಾಗಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಪುತ್ತೂರಿಗೆ ಬಂದ ಬಳಿಕ ಈ ಬೆಳವಣಿಗೆಗಳು ನಡೆದಿವೆ.
Home ಇತ್ತೀಚಿನ ಸುದ್ದಿಗಳು ಅರುಣ್ ಕುಮಾರ್ ಪುತ್ತಿಲ ಘರ್ವಾಪಾಸಿ ಖಚಿತ! – ಬೆಂಗಳೂರುನಲ್ಲಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ ?