ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ-ಆಕರ್ಷಕ ಪಥಸಂಚಲನ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಬಗ್ಗೆ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿದರು.
ಶಾಲಾ ಮುಖ್ಯಶಿಕ್ಷಕಿ ಕಮಲ ಅವರು ಸ್ವಾಗತಿಸಿ ಪ್ರಾಸ್ತಾವಿಕಿ ಮಾತುಗಳನ್ನಾಡಿದರು. ಶಿಕ್ಷಕಿಯರಾದ ಉಮಾವತಿ, ಅನಿತಾ, ದೀಕ್ಷಾ, ಅವಿತಾ ಹಾಗೂ ಪೋಷಕರಾದ ಜಯಕರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಜ್ಯೋತಿ ವಂದಿಸಿದರು.ಬ್ಯಾಂಡ್ ವಾದ್ಯಗಳೊಂದಿಗೆ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

LEAVE A REPLY

Please enter your comment!
Please enter your name here