ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಘದ ಕಚೇರಿಯಲ್ಲಿ ನಡೆಯಿತು.
ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ಅಧ್ಯಕ್ಷ ನಿವೃತ್ತ ಪ್ರಾಚಾರ್ಯ ಪ್ರೊ ಝೇವಿಯರ್ ಡಿಸೋಜ ಗಣರಾಜ್ಯೋತ್ಸವದ ಆಶಯ ಮತ್ತು ಸಂದೇಶಗಳನ್ನು ನೀಡಿದರು. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ ಐತ್ತಪ್ಪ ನಾಯ್ಕ್ ರವರು ಅಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಈ ಸಂದರ್ಭದಲ್ಲಿ 19ನೇ ಕರ್ನಾಟಕ ಎನ್ ಸಿ ಸಿ ಬೆಟಾಲಿಯನ್‌ಲ್ಲಿ ಆಯ್ಕೆಯಾದ ರಾಜ್ಯದ ಏಕೈಕ ಪ್ರತಿನಿಧಿಯಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸುವ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ವಿ ಶೆಟ್ಟಿಯವರಿಗೆ ಸಂಘದ ಪರವಾಗಿ ಉಪಾಧ್ಯಕ್ಷ ರಾಮದಾಸ್ ಗೌಡರವರು ಅಭಿನಂದನೆ ಸಲ್ಲಿಸಿದರು.
ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನ ಸ್ಪರ್ಧೆಗಳಲ್ಲಿ ಭಾಗವಹಿಸಿ ಮೂರು ವಿಭಾಗಗಳಲ್ಲಿ ಚಿನ್ನದ ಪದಕ ಪಡೆದ ಸಂಘದ ಕಾರ್ಯದರ್ಶಿ ತಿರುಮಲೇಶ್ವರ ಭಟ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಪ್ರೊ ವಿ ಬಿ ಅರ್ತಿಕಜೆ, ಡಾ ಮಾಧವ ಭಟ್ ಹೆಚ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಘದ ಕೋಶಾಧಿಕಾರಿ ಶಾಂತಿ ಟಿ ಹೆಗಡೆಯವರು ಕಾರ್ಯಕ್ರಮ ನಿರ್ವಹಿಸಿದರು. ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ರಾಷ್ಟ್ರ ಗೀತೆಯೊಂದಿಗೆ ಕೊನೆಗೊಂಡಿತು.ಸಂಘದ ಕಾರ್ಯದರ್ಶಿ ವಂದಿಸಿದರು.