ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ ಧ್ವಜಾರೋಹಣವನ್ನು ನೆರವೇರಿಸಿದರು.ನಂತರ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಗಣರಾಜ್ಯೋತ್ಸವ ದಿನಾಚರಣೆಯ ಕುರಿತು ಭಾಷಣಗಳನ್ನು ಮಾಡಿದರು ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ, ಮಧುರಾ ಎಜುಕೇಷನಲ್ ಟ್ರಸ್ಟ್ ಇದರ ಕೊ ಆರ್ಡಿನೇಟರ್ ಸೀಮಲ್ ಮಧುರಾ, ಸಂಸ್ಥೆಯ ವ್ಯವಸ್ಥಾಪಕ ಅಬ್ದುಲ್ ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿ ಪ್ರತೀಕ್ಷಾ ಸ್ವಾಗತಿಸಿ ಅಕ್ಷತಾ ವಂದಿಸಿದರು.ಶಿಕ್ಷಕಿ ಮನೋದಾ ಕಾರ್ಯಕ್ರಮವನ್ನು ನಿರೂಪಿಸಿದರು.ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.