ನಾಣಿಲ ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿಯವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ, ಎಸ್.ಡಿ.ಎಂ.ಸಿ
ಸದಸ್ಯರು ಹಾಗೂ ಪೋಷಕರು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯ ಗುರುಗಳಾದ ಪದ್ಮಯ ಗೌಡ ಸ್ವಾಗತಿಸಿದರು. ಸಹ ಶಿಕ್ಷಕರಾದ ಸುನಿಲ್ ಕುಮಾರ್ ಬಿ.ಪಿ ಗಣರಾಜ್ಯೋತ್ಸವದ ಬಗ್ಗೆ ವಿವರಿಸಿದರು. ಸಹ ಶಿಕ್ಷಕಿಯಾದ ನಂದಿನಿ ಎಸ್ ವಂದಿಸಿದರು.

LEAVE A REPLY

Please enter your comment!
Please enter your name here