ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ದೇವಾಂಗ ಸಮುದಾಯದ ಭಜನಾ ಮಂದಿರಕ್ಕೆ ಮೇಲ್ಛಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಪುತ್ತೂರು ಶಾಸಕರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ಕಳೆದ ಚುನಾವಣೆಯ ಸಂದರ್ಭದಲ್ಲಿ ನೆಲ್ಲಿಕಟ್ಟೆ ದೇವಾಂಗ ಸಮಾಜದ ಭಜನಾ ಮಂದಿರಕ್ಕೆ ಭೇಟಿ ನೀಡಿದಾಗ ಭಜನಾ ಮಂದಿರದ ಮೇಲ್ಛಾವಣಿ ನಿರ್ಮಾಣ ಮಾಡಿಕೊಡುವಂತೆ ಸಮುದಾಯದವರು ಶಾಸಕರಲ್ಲಿ ಮನವಿ ಮಾಡಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಲ್ಲಿ ಖಂಡಿತವಾಗಿಯೂ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಗೆದ್ದ ಬಳಿಕ ಅದೇ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.
ಮಂದಿರದ ಮೇಲ್ಛಾವಣಿಯನ್ನು ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಡುವ ಮೂಲಕ ಕೊಟ್ಟ ಮಾತನ್ನು ಶಾಸಕರು ಉಳಿಸಿಕೊಂಡಿದ್ದು ಅದರ ಉದ್ಘಾಟನೆಯನ್ನು ನೆರವೇರಿಸಿ ಶುಭಹಾರೈಸಿದರು. ಈ ವೇಳೆ ದೇವಾಂಗ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.