ವಳಕಡಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

0

ಕಡಬ: ಕೊಯಿಲ ಗ್ರಾಮದ ವಳಕಡಮ ಸರಕಾರಿ ಕಿ.ಪ್ರಾ.ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.


ಎಸ್‌ಡಿಎಂಸಿ ಅಧ್ಯಕ್ಷ ರಾಮಣ್ಣ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯಶಿಕ್ಷಕ ನಾರಾಯಣ ಪಿ.ಎಸ್.ಸ್ವಾಗತಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ ಗಣರಾಜ್ಯೋತ್ಸವ ಮಹತ್ವವನ್ನು ತಿಳಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗೌರವ ಶಿಕ್ಷಕಿ ಲಾವಣ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here