ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ 75 ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅಥಿತಿಯಾಗಿ ಆಗಮಿಸಿದ ಹಿದಾಯ ಫೌಂಡೇಶನ್ ಮತ್ತು ಎಮ್ ಫ್ರೆಂಡ್ಸ್ ಮಂಗಳೂರು ಇದರ ಅಧ್ಯಕ್ಷರಾದ ಹನೀಫ್ ಹಾಜಿ ಗೋಲ್ತಮಜಲ್ ರವರು ಧ್ವಜಾರೋಹಣ ಮಾಡಿದರು. ನಂತರ ಮಾತನಾಡಿದ ಇವರು ಮಕ್ಕಳಿಗೆ ಗಣರಾಜ್ಯೋತ್ಸವದ ಶುಭಾಷಯ ಕೋರಿ ಹಾಸನ ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವದ ಸಂಧರ್ಬದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿರುವ ಆಸ್ಪತ್ರೆ ಎಂದು ಜನಪ್ರಿಯ ಆಸ್ಪತ್ರೆಯನ್ನು ಸನ್ಮಾನಿಸಿದ್ದಕ್ಕಾಗಿ ಸಂಸ್ಥೆಯ ಮುಖ್ಯಸ್ಥ ಡಾ.ಅಬ್ದುಲ್ ಬಷೀರ್ ವಿ.ಕೆ. ಮತ್ತು ಸಂ ಸ್ಥೆಯ ಎಲ್ಲಾ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಯನ್ನು ಸಲ್ಲಿಸಿದರು.

ಶಾಲೆಯ ಪ್ರಾಂಶುಪಾಲರಾದ ಲಿಬಿನ್ ಕ್ಸೇವಿಯರ್ ರವರು ಮಾತಮಾಡಿ ದೇಶದ ವಿವಿದತೆಯಲ್ಲಿ ಏಕತೆಯ ಸಂದೇಶವನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಂಡಾಗ ಮಾತ್ರ ಆ ವ್ಯಕ್ತಿಯು ಶಿಕ್ಷಿತನೆಂದೆನಿಸಿಕೊಳ್ಳುತ್ತಾನೆ ಎಂದು ಮಕ್ಕಳಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ನೌಶೀನ್ ಬದ್ರಿಯಾ, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಹಿದಾಯ ಫೌಂಡೇಶನ್ ಮತ್ತು ಎಮ್ ಫ್ರೆಂಡ್ಸ್ ಮಂಗಳೂರು ಇದರ ಅಧ್ಯಕ್ಷರಾದ ಹನೀಫ್ ಹಾಜಿ ಗೋಲ್ತಮಜಲ್ ರವರನ್ಜು ಸನ್ಮಾನಿಸಲಾಯಿತು.
ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ವಿದ್ಯಾರ್ಥಿಗಳಾದ ಝಿವ ಮತ್ತು ಶನುಮ್ ಕಾರ್ಯಕ್ರಮ ನಿರೂಪಿಸಿ ಆಸಿಯ ಅರ್ಫಾ ಸ್ವಾಗತಿಸಿ, ನಫೀಸತ್ ಅಝ ವಂದಿಸಿದರು.

LEAVE A REPLY

Please enter your comment!
Please enter your name here