ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ

0

ನೆಲ್ಯಾಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಜ.26ರಂದು ಪತ್ನಿ ಶ್ರೀಮತಿ ಚೆನ್ನಮ್ಮ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.


ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕ್ಷೇತ್ರದ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, ವ್ಯವಸ್ಥಾಪನ ಸಮಿತಿಯ ಸದಸ್ಯರು, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಗೌರವಿಸಿದರು.

LEAVE A REPLY

Please enter your comment!
Please enter your name here