ಕಂಬಳಬೆಟ್ಟು ನಿವಾಸಿ ಡಾ.ಅಬ್ದುಲ್ ಬಶೀರ್ ರವರ ಮಾಲಕತ್ವದ ಹಾಸನದ ಜನಪ್ರಿಯ ಆಸ್ಪತ್ರೆಗೆ ಜಿಲ್ಲಾ ಅತ್ಯುತ್ತಮ ಆರೋಗ್ಯ ಸೇವಾ ಪ್ರಶಸ್ತಿ

0

ವಿಟ್ಲ: ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕದ (ABPMJAYCMS ARK) ಅಡಿಯಲ್ಲಿ ಜನತೆಗೆ ಉತ್ತಮ ಸೇವೆ ನೀಡಿರುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನಿವಾಸಿ ಡಾ.ಅಬ್ದುಲ್ ಬಶೀರ್ ಮಾಲಕತ್ವದ ಹಾಸನದಲ್ಲಿರುವ ಜನಪ್ರೀಯ ಆಸ್ಪತ್ರೆಗೆ ಜಿಲ್ಲಾ ಅತ್ಯುತ್ತಮ ಆರೋಗ್ಯ ಸೇವಾ ಪ್ರಶಸ್ತಿಯನ್ನು ಜಿಲ್ಲಾಡಳಿತದ ವತಿಯಿಂದ ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎನ್. ರಾಜಣ್ಣನವರು ಪ್ರಶಸ್ತಿ ಪ್ರಧಾನ ಮಾಡಿದರು. ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷರಾದ ಡಾ. ವಿ.ಕೆ ಅಬ್ದುಲ್ ಬಶೀರ್ ರವರು ಆಸ್ಪತ್ರೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿಯಾದ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನಿಲ್ ಕುಮಾರ್, AB-ARK ಜಿಲ್ಲಾ ಸಂಯೋಜನಾಧಿಕಾರಿ ಡಾ. ಪ್ರಸಾದ್ ಬಾಬು ಮೊದಲಾದವರು ಉಪಸ್ಥಿತರಿದ್ದರು.

ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಯೋಜನೆ ಅಡಿಯಲ್ಲಿ ಜನಪ್ರಿಯ ಆಸ್ಪತ್ರೆಯಲ್ಲಿ ನರರೋಗ ಶಸ್ತ್ರ ಚಿಕಿತ್ಸೆ. ಕೀಲು ಮತ್ತು ಮೂಳೆ ಶಸ್ತ್ರ ಚಿಕಿತ್ಸೆ, ಹೃದಯ ಶಸ್ತ್ರ ಚಿಕಿತ್ಸೆ, ಕಿಡ್ನಿಗೆ ಸಂಬಂಧಪಟ್ಟ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ ಶಸ್ತ್ರಚಿಕಿತ್ಸೆ, ಐಸಿಯು ಚಿಕಿತ್ಸೆ ಸಹಿತ ಇತರ ಸಾಮಾನ್ಯ ಚಿಕಿತ್ಸೆಗಳನ್ನು ನಗದುರಹಿತ ಮಾಡಿಕೊಡಲಾಗುತ್ತಿದೆ. ಸಾಮಾಜಿಕವಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಡಾ. ಅಬ್ದುಲ್ ಬಶೀರ್ ವಿ.ಕೆ.ರವರು ಬಡರೋಗಿಗಳಿಗೆ ಸದಾ ತನ್ನಿಂದಾದ ಸೇವೆಯನ್ನು ನೀಡುತ್ತಾ ಬರುತ್ತಿದ್ದಾರೆ. ಮೂಳೆರೋಗ ತಜ್ಞರಾಗಿರುವ ಅವರು ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮಾಡಿ ಜನರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಅಬ್ದುಲ್ ಬಶೀರ್ ರವರ ಸಾಮಾಜಿಕ ಕಳಕಳಿಯ ಸೇವೆಗಾಗಿ ಈ ವರೆಗೆ ಹಲವಾರು ಪ್ರಶಸ್ತಿಗಳು ಲಭಿಸಿದೆ. ಇತರ ಮಹಾನಗರಗಳಲ್ಲಿ ಸಿಗುವ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗಬೇಕೆನ್ನುವ ನಿಟ್ಟಿನಲ್ಲಿ ಡಾ.ಅಬ್ದುಲ್ ಬಶೀರ್‌ರವರು ತನ್ನ ಹುಟ್ಟೂರು ಕಂಬಳಬೆಟ್ಟುವಿನಲ್ಲಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ಎಂಬ ವಿದ್ಯಾಸಂಸ್ಥೆಯನ್ನು ತೆರೆದು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಈ ಭಾಗದ ಜನರಲ್ಲಿ ಆಶಾಭಾವನೆಯನ್ನು ಮೂಡಿಸಿದೆ ಮಾತ್ರವಲ್ಲದೆ ಪ್ರಶಂಸೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here