ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಮತ್ತು ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿಯಲ್ಲಿ ಸಹಕರಿಸಿದ ಕಾಣಿಯೂರು ಗ್ರಾಮ ಪಂಚಾಯತ್ ನ ಸದಸ್ಯರು ಹಾಗೂ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ್ ಉದನಡ್ಕ ಅವರನ್ನು ಶಾಲಾ ಅಭಿವೃದ್ಧಿ ಸಮಿತಿಯಿಂದ ಅಭಿನಂದಿಸಲಾಯಿತು.
ಮಕ್ಕಳ ಸಂತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿ ಮತ್ತು ಗಣೇಶ್ ಉದ್ಧನಡ್ಕ, ಮಕ್ಕಳಿಂದ ತರಕಾರಿ ಖರೀದಿಸುವ ಮೂಲಕ ಉದ್ಘಾಟಿಸಿದರು. ಕಾಣಿಯೂರು ಗ್ರಾಮ ಪಂಚಾಯತಿನ ಸದಸ್ಯರಾದ ಸುಲೋಚನ ಮಿಯೋಲ್ಪೆ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಜಿತ್ ಮಾಚಿಲ, ಮುಖ್ಯಗುರುಗಳಾದ ಪದ್ಮಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು ಹಾಗೂ ಊರಿನ ಗಣ್ಯರು ಶಾಲಾ ಮಕ್ಕಳು ಭಾಗವಹಿಸಿದ್ದರು. ಈ ಮೆಟ್ರಿಕ್ ಮೇಳದಲ್ಲಿ ಮಕ್ಕಳು ವಿವಿಧ ರೀತಿಯ ತರಕಾರಿ ಹಣ್ಣು ಹಂಪಲುಗಳು, ಜ್ಯೂಸ್, ಚರುಂಬುರಿ, ವಿವಿಧ ಗಿಡಗಳು ಫ್ಯಾನ್ಸಿ ವಸ್ತುಗಳು ಮನೆಯಲ್ಲಿ ಬೆಳೆದ ತರಕಾರಿ ಮತ್ತು ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ಮಾರಾಟ ಮಾಡಿದರು. ತಮ್ಮ ತಮ್ಮ ಸ್ಟಾಲ್ ಗಳ ಹೆಸರುಗಳು ಮತ್ತು ದರ ಪಟ್ಟಿಯನ್ನು ನಿಗದಿಪಡಿಸಿದ್ದರು.