ಪಟ್ಟೆ ವಿದ್ಯಾಸಂಸ್ಥೆಗಳಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

0

ಬಡಗನ್ನೂರುಃ ಪಟ್ಟೆ ವಿದ್ಯಾಸಂಸ್ಥೆಗಳಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಜ.26 ರಂದು ಆಚರಿಸಲಾಯಿತು.ಪ್ರತಿಭಾ ಪ್ರೌಢಶಾಲಾ ಎಸ್. ಡಿ.ಯಂ.ಸಿ ಅಧ್ಯಕ್ಷ ಬೆಳಿಯಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅತಿಥಿಗಳಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಕೃಷ್ಣ ಹಿ.ಪ್ರಾ.ಶಾಲಾ ಎಸ್. ಡಿ.ಯಂ.ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಪ್ರತಿಭಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ, ಶ್ರೀಕೃಷ್ಣ ಹಿ.ಪ್ರಸ.ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಭಟ್, ಉಭಯ ವಿದ್ಯಾಸಂಸ್ಥೆಗಳ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಅಧ್ಯಾಪಕ ವೃಂದದವರು ಮಕ್ಕಳ ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.ಪ್ರತಿಭಾ ಪ್ರೌಢಶಾಲಾ ಸಹ ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here