ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ, ದೇವರ ದರ್ಶನ ಬಲಿ, ದೈವಗಳ ನೇಮೋತ್ಸವ

0

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವ, ದರ್ಶನ ಬಲಿ ಹಾಗೂ ಕ್ಷೇತ್ರದ ದೈವಗಳ ನೇಮೋತ್ಸವವು ಜ.೨೬ರಂದು ಸಂಜೆ ನೆರವೇರಿತು.


ವೇ.ಮೂ ಸುರೇಶ ನಕ್ಷತ್ರಿತ್ತಾಯರವರ ಉಪಸ್ಥಿತಿಯಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರವರ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿಹೋಮ, ಶ್ರೀ ದೇವರಿಗೆ ಕಲಶ ಪೂಜೆ, ಕಲಶಾಭಿಷೇಕ, ನಾಗತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಕ್ಷೇತ್ರದ ದೈವಗಳಾದ ಧೂಮಾವತಿ ಹಾಗೂ ಗುಳಿಗ ದೈವಗಳ ಭಂಡಾರ ತೆಗೆದ ಬಳಿಕ ಶ್ರೀ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಿತು.


ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು, ತಾ.ಪಂ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಪುಲಸ್ತ್ಯ ರೈ, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ದೇವಸ್ಥಾನದ ಪುಷ್ಪಾಲಂಕಾರದ ಸೇವಾಕರ್ತರು, ಮೈಸೂರು ಎಸ್‌ಎಲ್‌ವಿ ಬುಕ್ ಏಜೆನ್ಸಿಯ ದಿವಾಕರ ದಾಸ್ ನೇರ್ಲಾಜೆ, ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ರೈ ನುಳಿಯಾಲು, ನಗರ ಸಭಾ ಸದಸ್ಯರಾದ ವಿದ್ಯಾ ಆರ್ ಗೌರಿ, ರಮೇಶ್ ರೈ ನೆಲ್ಲಿಕಟ್ಟೆ, ಶೀನಪ್ಪ ನಾಯ್ಕ, ಉದ್ಯಮಿಗಳಾ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ, ಶಿವರಾಮ ಆಳ್ವ ಬಳ್ಳಮಜಲು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸದಸ್ಯರಾದ ಜಯಕುಮಾರ್ ನಾಯರ್, ಲಕ್ಷ್ಮಣ್ ಬೈಲಾಡಿ, ವಿನ್ಯಾಸ್ ಯು.ಎಸ್., ಜಗದೀಶ ಎಂ., ಪ್ರೇಮ ಸಪಲ್ಯ, ಶಶಿಕಲಾ ನಿರಂಜನ ಶೆಟ್ಟಿ, ಅರ್ಚಕ ಮೋಹನ ರಾವ್, ಉತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಕೆ., ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ಎಸ್.ಕೆ., ಜತೆ ಕಾರ್ಯದರ್ಶಿಗಳಾದ ಸಂತೋಷ್ ಕೆ. ಮುಕ್ರಂಪಾಡಿ, ನಾಗೇಶ್ ಸಂಪ್ಯ, ಉಪಾಧ್ಯಕ್ಷರಾದ ಶ್ರೀಕೃಷ್ಣ ಭಟ್, ರಮೇಶ್ ಪ್ರಭು, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿ ಜಾತ್ರೋತ್ಸವದ ವೈಭವವನ್ನು ಕಣ್ತುಂಬಿಕೊಂಡು ಪುನೀತರಾದರು.

LEAVE A REPLY

Please enter your comment!
Please enter your name here