ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಎಂದಿನಂತೆ 75ನೇ ವರ್ಷದ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ಪ್ರಜಾಪ್ರಭುತ್ವ ದಿನ ನಮಗೆಲ್ಲರಿಗೂ ಪವಿತ್ರವಾದ ದಿನ. ನಾವೆಲ್ಲರೂ ನಮ್ಮ ದೇಶದ ಹಿರಿಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡೋಣ” ಎಂದು ಎಲ್ಲರಿಗೂ ಶುಭಹಾರೈಸಿದರು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಸಂವಿಧಾನದ ರಚನೆ ಹಾಗೂ ಅದನ್ನು ಕಾಪಾಡುವಲ್ಲಿ ನಮ್ಮ ಕರ್ತವ್ಯಗಳ ಬಗ್ಗೆ” ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹಾದೇವ ಶಾಸ್ತ್ರಿ, ಸದಸ್ಯ ಈಶ್ವರಚಂದ್ರ, ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here