ಕಡಬ:2023-24ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ ಉದ್ಘಾಟಿಸಿ, ಮತದಾರರ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಡಬ ತಾ.ಪಂ. ಕಾರ್ಯನಿರ್ವಾಹಕಾ ಅಧಿಕಾರಿ, ಕಡಬ ತಾಲೂಕು ಎಸ್.ಇ.ವಿ.ವಿ.ಪಿ ಸಮಿತಿಯ ಅಧ್ಯಕ್ಷ ಭವಾನಿಶಂಕರ್ ಎನ್. ಹಾಗೂ ಇವರು ಮಾತನಾಡಿ ಮತದಾನದ ಉದ್ದೇಶ, ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲರು ಹಾಗೂ ಗೃಹ ರಕ್ಷಕ ದಳದ ನಿವೃತ್ತ ಕಮಾಂಡೆಂಟ್ ಟಿ. ಜಿ. ಮ್ಯಾಥ್ಯೂ ಇವರು ಮಾತನಾಡಿ, ಮತದಾನದ ಅವಶ್ಯಕತೆ , ಮತದಾನದ ಘನತೆ , ನ್ಯಾಯ ಸಮ್ಮತ ಚುನಾವಣೆ ಮತ್ತು ಯುವ ಮತದಾರರುಂಬ ವಿಷಯದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ (ಎನ್.ವಿ.ಡಿ.) ಗೆ ಸಂಬಂಧಿಸಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ (ಪದವಿ, ಪದವಿಪೂರ್ವ ಹಾಗೂ ಪ್ರೌಢಶಾಲೆ) ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಸದ್ರಿ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು. ಹಾಗೂ ಯುವ ಮತದಾರರನ್ನು ಗುರುತಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಉಪ ತಹಶೀಲ್ದಾರರಾದ ಮನೋಹರ್, ಕಾಲೇಜಿನ ಪ್ರಾಂಶುಪಾಲರುಗಳು, ಅಧ್ಯಾಪಕರು, ಕಂದಾಯ ಇಲಾಖೆಯ ಅಧಿಕಾರಿಗಳು, ಬಿ.ಎಲ್. ಓ ಗಳು, ತಾಲೂಕು ಪಂಚಾಯತ್ ಮತ್ತು ತಾಲೂಕು ಕಛೇರಿ ಅಧಿಕಾರಿಗಳು, ಹಾಗೂ ಯುವ ಮತದಾರರು ಭಾಗವಹಿಸಿದ್ದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ ಸ್ವಾಗತಿಸಿದರು. ವ್ಯವಸ್ಥಾಪಕರಾದ ಭುವನೇಂದ್ರ ಕುಮಾರ್ ಇವರು ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ಸಹಕರಿಸಿದರು.