ಜಿಲ್ಲಾ ಮಟ್ಟದ ಶಾಂತಿವನ ಟ್ರಸ್ಟ್ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿಯ ಧನುಷ್ ಕೆ ಪ್ರಥಮ

0

ಕಾಣಿಯೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಿಂದ ಜ 27ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ” ಜ್ಞಾನ ಶರಧಿ ” ಎಂಬ ನೈತಿಕ ಮೌಲ್ಯಧಾರಿತ ಪುಸ್ತಕದ ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾ ಸಂಸ್ಥೆ ಕಾಣಿಯೂರಿನ 5 ನೇ ತರಗತಿಯ ವಿದ್ಯಾರ್ಥಿ ಧನುಷ್ ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರು ಕಡಬ ತಾಲೂಕಿನ ಚಾರ್ವಕದ ಕಾಸ್ಪಾಡಿ ಸತ್ಯನಾರಾಯಣ ಕಲ್ಲೂರಾಯ ಮತ್ತು ಕಲ್ಪನಾ ದಂಪತಿಗಳ ಪುತ್ರ.ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿದರು. ಹಿರಿಯ ಶಿಕ್ಷಕಿ ವಿನಯ ವಿ ಶೆಟ್ಟಿ ಮಾರ್ಗದರ್ಶನ ನೀಡಿರುತ್ತಾರೆ. ಶಿಕ್ಷಕಿ ಜಯಶೀಲ ಕೆ ಸಹಕರಿಸಿರುತ್ತಾರೆ.

LEAVE A REPLY

Please enter your comment!
Please enter your name here