ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ನಾಲ್ಕರ ರೋಟರಿ ಕ್ಲಬ್ ಪುತ್ತೂರು ಸಿಟಿಗೆ ಜ.30ರಂದು ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ರವರು ಅಧಿಕೃತ ಭೇಟಿ ನೀಡುವ ಮೂಲಕ ಕ್ಲಬ್ ನ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.
ಸಂಜೆ ಸುದಾನ ಶಾಲೆಯ ಆವರಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಲಾರೆನ್ಸ್ ಗೊನ್ಸಾಲ್ವಿಸ್, ವಲಯ ಸೇನಾನಿ ಅಣ್ಣಪ್ಪ ಶಾಸ್ತಾನರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಸಿಟಿ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸ್, ಕಾರ್ಯದರ್ಶಿ ಶ್ಯಾಮಲಾ ಶೆಟ್ಟಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.