ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರನ್ನು ಮಾಜಿ ರೌಡಿಶೀಟರ್ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿರುವುದನ್ನು ಆಮ್ ಆದ್ಮಿ ಪಕ್ಷದ ನಾಯಕ ಡಾ.ವಿಶುಕುಮಾರ್ ಖಂಡಿಸಿದ್ದಾರೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
