ರಾಮಕುಂಜ ಪ್ರೌಢಶಾಲೆ, ಪ.ಪೂ.ಕಾಲೇಜಿನಲ್ಲಿ ಗಣರಾಜ್ಯೋತ್ಸವ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಕಡಬ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದ್ಮಪ್ಪ ಗೌಡ ಕೆ. ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಬೆಂಗಳೂರಿನ ಪ್ರತಿಷ್ಠಿತ ಇಂಟೆಲ್ ಕಂಪನಿಯ ಟೆಕ್ನಿಕಲ್ ಮ್ಯಾನೇಜರ್ ಚೇತನ್‌ರವರು ಸಂದರ್ಭೋಚಿತವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ.ಅವರು ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಗುರು ಸತೀಶ್ ಭಟ್ ಅವರು ವಂದಿಸಿದರು. ಉಪನ್ಯಾಸಕ ವೃಂದ, ಶಿಕ್ಷಕ ವೃಂದ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here