ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ 2023-24ನೇ ಸಾಲಿನ ವಿಕಲಚೇತನರ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಪಂಚಾಯತ್ ಬಹುಮಟ್ಟದ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ಯೋಜನೆಗಳ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜೆ.ಕೆ ಮಾತನಾಡಿ ಉದೋಗ್ಯ ಖಾತರಿ ಯೋಜನೆಯಲ್ಲಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಕೆಲಸ ಪ್ರಮಾಣದಲ್ಲಿ ಶೇ.50ರಷ್ಟು ಮೀಸಲಾತಿ ಇರುತ್ತದೆ. ವಿಕಲಚೇತನರು ಸಾಮಾನ್ಯರಂತೆ ಉದ್ಯೋಗ ಅವಕಾಶ ಮಾಡಲು ಅವಕಾಶ ಇದೆ ಎಂದು ಮಾಹಿತಿ ನೀಡಿದರು. ವಿಕಲಚೇತನರು. ವಿಕಲಚೇತನರ ಪೋಷಕರು, ಗ್ರಾಮ ಪಂಚಾಯತ್ ಸದಸ್ಯರು, ಮುಂಡೂರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸತೀಶ್, ಪಂಚಾಯತ್ ಸಿಬ್ಬಂದಿ ವರ್ಗ ಸಹಕರಿಸಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಜಿತ್ ಜೆ.ಕೆ ಕಾರ್ಯಕ್ರಮ ನಿರೂಪಿಸಿದರು.