ಒಳಮೊಗ್ರು ಗ್ರಾ.ಪಂ.ನಲ್ಲಿ ವಿಕಲಚೇತನರ ವಿಶೇಷ ಗ್ರಾಮ ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ನವೋದಯ ರೃತ ಸಭಾಭವನದಲ್ಲಿ 2023-2024ನೇ ಸಾಲಿನ ವಿಕಲಚೇತನರ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ಯು. ಆಶ್ರಫ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ., ಹಾಗೂ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅರತಿ ಪಿ., ಸಮುದಾಯದ ಕೇಂದ್ರ ಅರೋಗ್ಯ ಅಧಿಕಾರಿ ವಿದ್ಯಾಶ್ರೀ, ಎಂಡೋ ಅರೋಗ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಂಯೋಜಕ ನವೀನ್ ಕುಮಾರ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಒಳಮೊಗ್ರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋಹನ್ ಕೆ.ಪಿ. ವಿಕಲಚೇತನರು ಮತ್ತು ಎಂಡೋ ಪೀಡಿತರು, ಎಂಡೋಪೀಡಿತರ ಪೋಷಕರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಸಹಾಯಕಿಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here