ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ ವಿಕಲಚೇತನರ ವಿಶೇಷ ಗ್ರಾಮ ಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ 2023-2024ನೇ ಸಾಲಿನ ವಿಕಲಚೇತನರ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಸುಜಾತ ಎನ್. ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ರೇವತಿ ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್‌ನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ಯೋಜನೆಗಳ ಮಾಹಿತಿ ನೀಡಿದರು. ತಿಂಗಳಾಡಿ ಪ್ರಾಥಮಿಕ ಅರೋಗ್ಯ ಸಮುದಾಯ ಸುರಕ್ಷಾ ಅಧಿಕಾರಿ ವಿದ್ಯಾ ಎಂಡೋಪೀಡಿತರ ಆರೋಗ್ಯ ಕಾರ್ಯಕ್ರಮದ ಮಾಹಿತಿ ನೀಡಿದರು. ವಿಕಲಚೇತನರು ಹಾಗೂ ವಿಕಲಚೇತನರ ಆರೈಕೆದಾರರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು, ಕೆಯ್ಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ರಫೀಕ್ ಟಿ.ಎಂ, ಕೆದಂಬಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಪವಿತ್ರ ಸಹಕರಿಸಿದರು. ಗ್ರಾ.ಪಂ. ಕಾರ್ಯದರ್ಶಿ ಸುನಂದಾ ರೈ ಕಾರ್ಯಕ್ರಮ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here