ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ.3 ಮತ್ತು 4ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಫೆ.3ರಂದು ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ, ರಾತ್ರಿ 8ರಿಂದ ದೇವರ ಬಲಿ ಹೊರಟು ಭೂತ ಬಲಿ ಉತ್ಸವ, ವಸಂತ ಕಟ್ಟೆಪೂಜೆ ನಡೆಯಲಿದೆ. ಫೆ.4ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ದೇವರ ಬಲಿ ಒಳಗಾಗುವುದು, ಕಲಶಾಭಿಷೇಕ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ದೈವದ ಭಂಡಾರ ತೆಗೆಯುವುದು, ಪಿಲಿಭೂತ ದೈವದ ನೇಮನಡಾವಳಿಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.