ಫೆ.1: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭದ ಆಧಾರ ಶಿಲಾಪ್ರತಿಷ್ಟೆ ರತ್ನಾನ್ಯಾಸ, ಧ್ವಜಸ್ತಂಭ ಸ್ಥಾಪನೆ

0

ಪುತ್ತೂರು : ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಫೆ.1ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೂತನ ಧ್ವಜಸ್ತಂಭದ ಆಧಾರ ಶಿಲಾಪ್ರತಿಷ್ಟೆ ರತ್ನಾನ್ಯಾಸ, ಧ್ವಜಸ್ತಂಭ ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 11 ಗಂಟೆಯಿಂದ ಧ್ವಜಸ್ತಂಭ ಸ್ಥಾಪನೆಯ ವೈದ್ಧಿಕ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಸೌಂದರ್ಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರು, ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಸೌಂದರ್ಯ ಪಿ. ಮಂಜಪ್ಪ, ಧಾರ್ಮಿಕ‌ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ , ಶ್ರೀ ನಳೀಲು ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಸಂತೋಷ್ ರೈ, ಪ್ರಗತಿಪರ ಕೃಷಿಕರು
ನವೀನ್ ಚಂದ್ರ ನಾಯ್ಕ್ ಕಜೆ, ಲಿಂಗಪ್ಪ ಗೌಡ ಹಿರ್ಕುಡೇಲು , ಕೊಡಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಪ್ಪ ಪೂಜಾರಿ ಓಜಾಲ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here