ಮಲ್ಲಿಕಾರ್ಜುನ ಖರ್ಗೆಯವರಿಗೆ ನಿಂದನೆ ಪ್ರಕರಣ:ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್ಐಆರ್‌ಗೆ ತಡೆ-ಸೂಲಿಬೆಲೆ ಪರ ಅರುಣ್ ಶ್ಯಾಮ್, ಸುಯೋಗ್ ಹೇರಳೆ ವಾದ

0

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪದ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಕಲಬುರ್ಗಿ ಪೀಠ ಮಧ್ಯಂತರ ತಡೆ ನೀಡಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪರವಾಗಿ ಹಿರಿಯ ವಕೀಲ ಅರುಣ್‌ಶ್ಯಾಂ ಮತ್ತು ಸುಯೋಗ್ ಹೇರಳೆ ವಾದಿಸಿದ್ದರು.

ರಾಯಚೂರು ಸಿರವಾರದಲ್ಲಿ ಯುವ ಬ್ರಿಗೇಡ್ ವತಿಯಿಂದ ಜ.18ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಮತ್ತು ವೈಯಕ್ತಿಕವಾಗಿ ಸುಳ್ಳುಗಳನ್ನು ಸತ್ಯದ ರೀತಿಯಲ್ಲಿ ಬಿಂಬಿಸಿ ಜನರಿಗೆ ಮೋಸ ಮಾಡುವಂತೆ, ದ್ವೇಷ ಸೃಷ್ಟಿಸುವಂತೆ ಜಾತಿಯ ಕಾರಣದಿಂದ ಅವಹೇಳನ ಮಾಡಿರುವುದಾಗಿ ಆರೋಪಿಸಿ ಕಲ್ಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಎಂಬವರು ಸಿರವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸೂಲಿಬೆಲೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸುವಂತೆ ಚಕ್ರವರ್ತಿ ಸೂಲಿಬೆಲೆ ಅವರು ಕರ್ನಾಟಕ ಹೈಕೋರ್ಟ್ ಕಲ್ಬುರ್ಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿ ಅವರು ಎಫ್ಐಆರ್‌ಗೆ ಮಧ್ಯಂತರ ತಡೆಯಾe ನೀಡಿ ಆದೇಶ ಹೊರಡಿಸಿದ್ದು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮವನ್ನು ಜರುಗಿಸಬಾರದು ಎಂದು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here