ಮುಂಡೂರು ಮಹಾಲಿಂಗೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

0

ಪುತ್ತೂರು:ಮುಂಡೂರು ಮಹಾಲಿಂಗೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಭಾರತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ ಯಶೋಧ , ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಹಾಗೂ ವಲಯ ಮೇಲ್ವಿಚಾರಕಿ ನಮಿತಾ, ಒಕ್ಕೂಟದ ಕಾರ್ಯದರ್ಶಿ ಮಮತಾ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಸೂರಪ್ಪ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕಿ ನಮಿತಾ ವಾರ್ಡ್ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಒಕ್ಕೂಟ ಕಾರ್ಯವೈಖರಿ ಬಗ್ಗೆ ಒಕ್ಕೂಟದ ಸಿಬ್ಬಂದಿಗಳ ಬಗ್ಗೆ, NRLM ಯೋಜನೆ ಬಗ್ಗೆ ಮಾಹಿತಿ ನೀಡಿದರು. ವಾರ್ಷಿಕ ಮಹಾಸಭೆ & ಲೆಕ್ಕ ಪರಿಶೋಧನೆಯ ವರದಿಯನ್ನು ಕಾರ್ಯದರ್ಶಿ ಮಮತಾ ಮಂಡಿಸಿದರು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ರಾಧಿಕಾ ಸ್ವಾಗತಿಸಿ, ಭವಾನಿ ವಂದಿಸಿದರು.. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಭವಾನಿ ಮತ್ತು ರಾಧಿಕಾ ಪ್ರಾರ್ಥಿಸಿದರು. ಚೈತ್ರಾ ಮಧುಚಂದ್ರ ಎಲಿಯ ಶ್ರೀದುರ್ಗಾ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯೆ ಕಾರ್ಯಕ್ರಮ ನಿರೂಪಿಸಿದರು. ಸದ್ರಿ ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here